ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಜನಸಂಖ್ಯೆ ಅನುಗುಣವಾಗಿ ಉದ್ಯೋಗದಲ್ಲಿ ಮೀಸಲು ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಶಾಸಕರ ಭವನ ಸಮೀಪದಲ್ಲಿರುವ ರಾಕ್ ಗಾರ್ಡನ್‌ನಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಈಗಿರುವ ಮೀಸಲಾತಿ ಪ್ರಮಾಣವನ್ನು 50 ಪ್ರತಿಶತ ಹೆಚ್ಚಳ ಮಾಡುವ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿಬಿಟ್ಟಿದೆ. ಜಾತಿ ವ್ಯವಸ್ಥೆಯನ್ನು ಬಲವಾಗಿ ಬೆಳಸಲಾಗಿದೆ. ಆ ವ್ಯವಸ್ಥೆಯ ಬೇರುಗಳನ್ನು ಸಡಿಲಗೊಳಿಸಿ ಕಿತ್ತು ಹಾಕಬೇಕಾಗಿದೆ ಎಂದು ತಿಳಿಸಿದರು.
ಜಾತಿ ವ್ಯವಸ್ಥೆಯಲ್ಲಿ ಅಧಿಕಾರ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಎಲ್ಲರಿಗೂ ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು. ಅಧಿಕಾರ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆ ಆದಾಗ ಮಾತ್ರ. ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ