Publish Date: Wed, 04 Sep 2024 (19:00 IST)
Updated Date: Wed, 04 Sep 2024 (19:03 IST)
ಶಿವಮೊಗ್ಗ: ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ನ್ಯಾಯಾಲಯದ ತೀರ್ಪಿನ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ಈಗಲೇ ಗೌರವಯುತವಾಗಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದರು. ಎಂದು ಭವಿಷ್ಯ ನುಡಿದರು.
ಈ ಸಂಬಂಧ ಇನ್ನು ಹೋರಾಟದ ಅಗತ್ಯವಿಲ್ಲ. ಅವರು ಮಾಡಿರುವ ಹಗರಣಗಳೆಲ್ಲವೂ ಸಾಬೀತಾಗಿದೆ. ಒಂದು ರೀತಿಯಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದಿದ್ದು, ಸಹಜವಾಗಿಯೇ ಅವರು(ಸಿಎಂ) ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದರು.
ಇನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದರಿಂದ ಸಿದ್ದರಾಮಯ್ಯಗೆ ಸದ್ಯ ರಿಲೀಫ್ ಸಿಕ್ಕಿದೆ.