Daily Horoscope
✕

ಸಿದ್ದರಾಮಯ್ಯ ಅವರು ಈಗಲೇ ರಾಜೀನಾಮೆ ನೀಡಿದ್ರೆ ಗೌರವಯುತ: ಬಿಎಸ್‌ ಯಡಿಯೂರಪ್ಪ

Sampriya
ಬುಧವಾರ, 4 ಸೆಪ್ಟಂಬರ್ 2024 (19:00 IST)
ಶಿವಮೊಗ್ಗ: ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ನ್ಯಾಯಾಲಯದ ತೀರ್ಪಿನ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ಈಗಲೇ ಗೌರವಯುತವಾಗಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದರು.  ಎಂದು ಭವಿಷ್ಯ ನುಡಿದರು.

ಈ ಸಂಬಂಧ ಇನ್ನು ಹೋರಾಟದ ಅಗತ್ಯವಿಲ್ಲ. ಅವರು ಮಾಡಿರುವ ಹಗರಣಗಳೆಲ್ಲವೂ ಸಾಬೀತಾಗಿದೆ. ಒಂದು ರೀತಿಯಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದಿದ್ದು, ಸಹಜವಾಗಿಯೇ ಅವರು(ಸಿಎಂ) ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದರು.

ಇನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದರಿಂದ ಸಿದ್ದರಾಮಯ್ಯಗೆ ಸದ್ಯ ರಿಲೀಫ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments