Publish Date: Wed, 04 Oct 2023 (21:00 IST)
Updated Date: Wed, 04 Oct 2023 (20:34 IST)
ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ನಿನ್ನೆ(ಮಂಗಳವಾರ) ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಸಾಲುಮರದ ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತೀವ್ರನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.