ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರ ಪೋಸ್ಟ್ ಹಾಕಿದ ಶಿಕ್ಷಕಿ ಅರೆಸ್ಟ್

Webdunia
ಭಾನುವಾರ, 17 ಫೆಬ್ರವರಿ 2019 (09:52 IST)
ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರ ಪೋಸ್ಟ್ ಹಾಕಿದ ಶಿಕ್ಷಕಿ ಮನೆಗೆ ಕಲ್ಲು ತೂರಿ, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಶಿವಾಪೂರ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಜಿಲೇಕಾ ಮಮದಾಪುರ್ ಫೇಸ್‍ಬುಕ್ ಹಾಗೂ ವಾಟ್ಸಪ್‍ಗಳಲ್ಲಿ ಪಾಕಿಸ್ತಾನ್ ಕಿ ಜೈ ಎಂದು ಪೋಸ್ಟ್ ಮಾಡಿದ್ದಾಳೆ. ಅಷ್ಟೇ ಅಲ್ಲದೇ ವಾಟ್ಸಪ್ ಡಿಪಿಯಲ್ಲೂ ಇದೇ ಫೋಟೋ ಹಾಕಿಕೊಂಡಿದ್ದಾಳೆ.

 

ಈಕೆಯ ಪೋಸ್ಟ್ ನೋಡಿ ರೊಚ್ಚಿಗೆದ್ದ ಸ್ಥಳೀಯರು ಕಡಬಿ-ಶಿವಾಪುರ ಗ್ರಾಮದಲ್ಲಿರುವ ಆಕೆಯ ಮನೆಗೆ  ಕಲ್ಲು ತೂರಾಟ ನಡೆಸಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮುರಗೋಡ ಪೊಲೀಸರು ಶಿಕ್ಷಕಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೇ ಮನೆಗೆ ಬೆಂಕಿ ಹಚ್ಚಿದ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಹಿನ್ನಲೆಯಲ್ಲಿ ಯುವತಿ ಮೇಲೆ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೂಡಲೇ ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ಹಾಗೂ ಸಾರ್ವಜನಿಕರು ಮುರಗೋಡ ಹೋಬಳಿ ಬಂದ್‍ಗೆ ಕರೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಮುಂದಿನ ಸುದ್ದಿ
Show comments