ಬೆಂಗಳೂರು: ಈ ಬಾರಿ ದೀಪಾವಳಿಗೆ ಪಟಾಕಿ ಹೊಡೆಯುವ ಸಂಭ್ರಮದಲ್ಲಿದ್ದರೆ ಕೆಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಲೇಬೇಕು.
ಸರ್ಕಾರ ಈಗಾಗಲೇ ಅಪಾಯಕಾರಿ ಪಟಾಕಿಗಳಿಗೆ ನಿಷೇಧ ಹೇರಿದೆ. ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಲು ಅವಕಾಶ ನೀಡಿದೆ.
ಆದರೆ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಕೇವಲ 2 ಗಂಟೆ ಕಾಲ ಮಾತ್ರ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ನ.11 ರಿಂದ 5 ರವರೆಗೆ ದೀಪಾವಳಿ ಹಬ್ಬವಿದ್ದು ಈ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿಗಳ ಮಾರಾಟಕ್ಕೂ ನಿಷೇಧ ಹೇರಲಾಗಿದೆ.