ನಿವೃತ್ತ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಭೂ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಭೂ ಖರೀದಿ ಹಗರಣದ ಕುರಿತು ಕೆಲವು ಅನುಮಾನಗಳಿವೆ ಎಂದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಸಿಎಸ್ ಅರವಿಂದ ಜಾಧವ್ ಖರೀದಿಸಿರುವ ಭೂಮಿಯ ದಾಖಲೆಯ ಸಂಖ್ಯೆ ಹಾಗೂ ವಾಸ್ತವಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ಹೀಗಾಗಿ ಮರು ಸರ್ವೆ ಮಾಡಲು ಆದೇಶ ನೀಡಿದ್ದೇನೆ ಎಂದು ಹೇಳಿದರು.
ಮಳೆ ಕೊರತೆಯಿಂದ ರಾಜ್ಯ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ರಾಜ್ಯದ ಒಟ್ಟು 110 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇದರಲ್ಲಿ ಇನ್ನೂ ಹಲವು ತಾಲೂಕುಗಳನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ