Publish Date: Sun, 29 Jan 2023 (13:35 IST)
Updated Date: Sun, 29 Jan 2023 (15:36 IST)
ಹಾಸನ : ನಾನು ಹೆಚ್.ಡಿ ಕುಮಾರಸ್ವಾಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಕೆಲವರು ಭವಾನಿ ಅವರಿಗೆ ಟಿಕೆಟ್ ಕೊಡಿ ಅಂತಾರೆ, ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡೋದು ಪಕ್ಷ.
ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರು ಏನ್ ತೀರ್ಮಾನ ಮಾಡ್ತಾರೋ ಅದೇ ಅಂತಿಮ ಎಂದು ಹಾಸನದ ಟಿಕೆಟ್ ಗೊಂದಲದ ಚರ್ಚೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತೆರೆ ಎಳೆದಿದ್ದಾರೆ.
ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಕುಮಾರಸ್ವಾಮಿ ಮತ್ತು ದೇವೇಗೌಡರು ರಾಜ್ಯದ ಅಧ್ಯಕ್ಷರು ಜಿಲ್ಲಾ ಮುಖಂಡರು ಏನು ತೀರ್ಮಾನ ಮಾಡ್ತಾರೆ ಅದೇ ಅಂತಿಮ. ನಾನು ಕುಮಾರಸ್ವಾಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ.
ಕೆಲವರು ಭವಾನಿ ಅವರಿಗೆ ಕೊಡಿ ಅಂತಾರೆ, ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡೋದು ಪಕ್ಷ. ನಾನಾಗಲಿ, ಸೂರಜ್ ಆಗಲಿ, ಪ್ರಜ್ವಲ್ ಆಗಲಿ ಯಾರೂ ತೀರ್ಮಾನ ಮಾಡುವ ಪ್ರಶ್ನೆ ಇಲ್ಲ. ಪಕ್ಷದ ಹೈಕಮಾಂಡ್ ಏನು ಹೇಳುತ್ತೆ ಅದಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತೆ. ಕುಮಾರಸ್ವಾಮಿ ಮತ್ತೆ ದೇವೇಗೌಡರು ಇಬ್ರಾಹಿಂ ಸಾಹೇಬ್ರು ಜಿಲ್ಲೆಯ ಶಾಸಕರು ನಮ್ಮ ಏಳು ಸೀಟ್ ತೀರ್ಮಾನ ಮಾಡ್ತಾರೆ.