Webdunia - Bharat's app for daily news and videos

Install App

ರೇವಣ್ಣ ಬಸವನಗುಡಿ ಮನೆಗೆ ಸಂತ್ರಸ್ತೆ ಕರೆತಂದು ಸ್ಥಳ ಮಹಜರು

Sampriya
ಸೋಮವಾರ, 6 ಮೇ 2024 (16:41 IST)
Photo Courtesy X
ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಅನ್ವಯ ಎಸ್‌ಐಟಿ ಅಧಿಕಾರಿಗಳು ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದರು.

ಪೊಲೀಸ್ ವಾಹನದಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಮನೆಗೆ ಕರೆದುಕೊಂಡು ಬಂದು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ಮಾಡಿದರು. ಅಲ್ಲದೆ ಘಟನೆಯ ಮರುಸೃಷ್ಟಿ ಮಾಡಿ, ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.

ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆಗಾಗಿ ಮೇ 8ರವರೆಗೆ ಕಸ್ಟಡಿಗೆ ಪಡೆದಿದ್ದು, ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಶೀಘ್ರದಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಇಂದು ಆರೋಪಿ ಮನೆ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ