Publish Date: Sun, 10 Dec 2017 (07:20 IST)
Updated Date: Sun, 10 Dec 2017 (07:22 IST)
ರೈತರು ಬ್ಯಾಂಕುಗಳಲ್ಲಿ ಸಾಲ ಮಾಡುವುದಿದ್ದರೆ ಸಾಲ ಮಾಡಿಬಿಡಿ, ಜೆಡಿಎಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಶನಿವಾರ ಸಂತೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ರೈತರಿಗೆ ಸಾಲ ಮಾಡುವಂತೆ ಕರೆ ನೀಡಿದ್ದಾರೆ.
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ರೈತರ ಸಾಲ ಮನ್ನಾ ಮಾಡಲಾಗುವುದು. ಎಲ್ಲ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲಾಗುವುದು. ರೈತರನ್ನು ಸಾಲದಿಂದ ಮುಕ್ತರನ್ನಾಗಿಸುವು ಜೆಡಿಎಸ್ ಉದ್ದೇಶವಾಗಿದ್ದು, ಸಾಲ ಮಾಡುವವರಿದ್ದರೆ ಸಾಲ ಮಾಡಿಬಿಡಿ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.