Daily Horoscope
✕

ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಯಡಿಯೂರಪ್ಪನ ಕಾಲಿಗೆ ಬೀಳಲಿ- ರೇವಣ್ಣ ವಾಗ್ದಾಳಿ

Webdunia
ಸೋಮವಾರ, 15 ಏಪ್ರಿಲ್ 2019 (08:50 IST)
ಹಾಸನ : ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ  ಕಾಲಿಗೆ ಬೀಳಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈಶ್ವರಪ್ಪ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ ಎಂದ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಕೆ.ಎಸ್.ಈಶ್ವರಪ್ಪನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ. ಅವರು ಏನು ಅಂತ ಎಲ್ಲರಿಗೂ ಗೊತ್ತಿದೆ. ಅವನು ಒಂದು ರೀತಿ ಬುಡುಬುಡುಕೆ ಇದ್ದಂತೆ. ರಾಜ್ಯದಲ್ಲಿ ಯಾರೂ ಈಶ್ವರಪ್ಪನ ಹೆಸರು ಹೇಳುತ್ತಾರಾ? ಅವನಿಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬೀಳಲಿ. ಈ ರೀತಿಯ ಈಶ್ವರಪ್ಪನಂಥವನನ್ನು ನಾನು ಎಷ್ಟೋ ಜನ ನೋಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.


ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಸಮ್ಮಿಶ್ರ ಸರ್ಕಾರ ಹಾಸನಕ್ಕೆ ಹಲವು ಯೋಜನೆ ಕೊಟ್ಟರೆ ಇದು ಹಾಸನ ಬಜೆಟ್ ಅಂತ ಹೇಳುತ್ತಾರೆ. ಈ ರೀತಿ ಮಾತನಾಡುವವರು ಯಾವ ಮುಖ ಹೊತ್ತು ಈಗ ಮತ ಕೇಳುತ್ತಾರೋ ಗೊತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ 8 ವಿಧಾನಸಭಾ ಕ್ಷೇತ್ರಗಳ ಜನರು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments