Publish Date: Fri, 12 Jul 2019 (09:58 IST)
Updated Date: Fri, 12 Jul 2019 (10:00 IST)
ಮೈಸೂರು : ಮೈತ್ರಿ ಸರ್ಕಾರ ಗಂಡಾಂತರದಲ್ಲಿರುವ ಹಿನ್ನಲೆಯಲ್ಲಿ ಈಗಾಗಲೇ ಟೆಂಪಲ್ ರನ್ ಮಾಡುತ್ತಿರುವ ಸಚಿವ ಎಚ್ ಡಿ ರೇವಣ್ಣ ಇದೀಗ ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್ ಡಿ ರೇವಣ್ಣ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ ದೇವರ ಆಶೀರ್ವಾದ ಇರುವವರೆಗೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರ್ತಾರೆ ಎಂದು ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಸಂಕಲ್ಪ ಮಾಡಿಸಿದ್ದೇನೆ. ಚಾಮುಂಡೇಶ್ವರಿ ಅನುಗ್ರಹ ಸಿಎಂ ಕುಮಾರಸ್ವಾಮಿ ಮೇಲಿದೆ. ಸಿಎಂ ಕುಮಾರಸ್ವಾಮಿಗೆ ಸರ್ಕಾರದ ಅವಶ್ಯಕತೆ ಇಲ್ಲ. ಆದ್ರೆ ರಾಜ್ಯದ ಜನತೆಗೆ ಸಿಎಂ ಕುಮಾರಸ್ವಾಮಿ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.