ಬೆಂಗಳೂರು : ಮತದಾನದ ಹಿನ್ನಲೆಯಲ್ಲಿ ಇಂದು ಜಾಲಹಳ್ಳಿಯ ಮತಗಟ್ಟೆಯೊಂದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.
									
										
								
																	
ಜಾಲಹಳ್ಳಿ ಕ್ಲಾರೆಂಟ್ ಶಾಲೆ ಮತಗಟ್ಟೆಯ ಬಳಿ ಟೇಬಲ್ ಹಾಕುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಕಾರ್ಯಕರ್ತರು ಜಗಳವಾಡಿದ್ದಾರೆ.
									
			
			 
 			
 
 			
			                     
							
							
			        							
								
																	ಆ ವೇಳೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.