Select Your Language

Notifications

webdunia
webdunia
webdunia
webdunia

ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ರಸ್ತೆ ಅಪಘಾತ: ವಿಜಯಪುರದ ಇಬ್ಬರು ಸಾವು

MahakumbhMela 2025, Road Accident, Gujarat,

Sampriya

ವಿಜಯಪುರ , ಮಂಗಳವಾರ, 25 ಫೆಬ್ರವರಿ 2025 (14:57 IST)
ವಿಜಯಪುರ: ಪ್ರಯಾಗ್‌ರಾಜ್ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್  ಸಮೀಪ ನಡೆದಿದೆ.

ಮೃತರನ್ನು ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್, ಗುಜರಾತ್‌ನ ಪೋರ್‌ಬಂದರ್ ಸಮೀಪ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.  ಗಾಯಗೊಂಡವರನ್ನು ಪೋರ್‌ಬಂದರ್‌ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೇಜ್ರಿವಾಲ್‌ಗೆ ಶಾಕ್‌: ಅಬಕಾರಿ ನೀತಿಯ ನಷ್ಟ ಬಿಚ್ಚಿಟ್ಟ ರೇಖಾ ಗುಪ್ತಾ