Publish Date: Sun, 25 Nov 2018 (17:59 IST)
Updated Date: Sun, 25 Nov 2018 (18:02 IST)
ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮಸ್ಥರಿಂದ ರಸ್ತೆ ತಡೆ ನಡೆದಿದೆ.
ಮದ್ದೂರು ಮಳವಳ್ಳಿ ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು, ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಗ್ರಾಮಕ್ಕೆ ತರುವಂತೆ ಪಟ್ಟು ಹಿಡಿದಿದ್ದಾರೆ.
ದೊಡ್ಡರಸಿನಕೆರೆ ಅಂಬಿ ಸ್ವಗ್ರಾಮವಾಗಿದೆ. ಹೀಗಾಗಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರಬೇಕು. ಮೃತರ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.