Select Your Language

Notifications

webdunia
webdunia
webdunia
webdunia

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷರು

Sampriya

ಮಂಗಳೂರು , ಸೋಮವಾರ, 12 ಮೇ 2025 (17:18 IST)
Photo Credit X
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇಡ್ಕಿದು ಗ್ರಾಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ವರದಿಯಾಘಿದೆ.

ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ.

 ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಸಫಲ್ಯ ವಿರುದ್ಧ ದೂರು ದಾಖಲಾಗುತ್ತಿದ್ದ ಹಾಗೇ  ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಮಹಿಳೆ ನೀಡಿದ ದೂರಿನಲ್ಲೇನಿದೆ?

ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Virat Kohli: ಭಾರತೀಯ ಸೇನೆಯ ಸುದ್ದಿಗೋಷ್ಠಿಯಲ್ಲೂ ವಿರಾಟ್ ಕೊಹ್ಲಿಯದ್ದೇ ಹವಾ