Webdunia - Bharat's app for daily news and videos

Install App

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

Sampriya
ಸೋಮವಾರ, 12 ಮೇ 2025 (17:18 IST)
Photo Credit X
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇಡ್ಕಿದು ಗ್ರಾಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ವರದಿಯಾಘಿದೆ.

ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ.

 ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಸಫಲ್ಯ ವಿರುದ್ಧ ದೂರು ದಾಖಲಾಗುತ್ತಿದ್ದ ಹಾಗೇ  ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಮಹಿಳೆ ನೀಡಿದ ದೂರಿನಲ್ಲೇನಿದೆ?

ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ