Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ರೋಡ್‌ಶೋ, ಉದ್ಯಮಿಗಳ ಜತೆ ಅಶ್ವತ್ಥನಾರಾಯಣ ಭೇಟಿ

ದೆಹಲಿಯಲ್ಲಿ ರೋಡ್‌ಶೋ, ಉದ್ಯಮಿಗಳ ಜತೆ ಅಶ್ವತ್ಥನಾರಾಯಣ ಭೇಟಿ
bangalore , ಬುಧವಾರ, 19 ಅಕ್ಟೋಬರ್ 2022 (14:45 IST)
ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತವಾಗಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್‌) 25ನೇ ವರ್ಷದ ರಜತ ಮಹೋತ್ಸವ ಶೃಂಗಸಭೆಯು ನ.16ರಿಂದ 18ರವರೆಗೆ ನಡೆಯಲಿದ್ದು, ಈ ಬಾರಿ 5ಜಿ ತಂತ್ರಜ್ಞಾನ ಸೇರಿದಂತೆ, ಹೈಬ್ರಿಡ್ ಕ್ಲೌಡ್‌, ಎಡ್ಜ್ ಕಂಪ್ಯೂಟಿಂಗ್, ಫಿನ್‌ಟೆಕ್‌, ಜಿನೋಮಿಕ್ಸ್‌ 2.0 ಮುಂತಾದ ಅತ್ಯಾಧುನಿಕ ತಂತ್ರಜ್ಞಾನ ಧಾರೆಗಳನ್ನು ಕುರಿತು ಮತ್ತು ಈ ಕ್ಷೇತ್ರದಲ್ಲಿ ಆಗಬೇಕಾದ ಹೂಡಿಕೆಯ ಬಗ್ಗೆ ಪ್ರಧಾನವಾಗಿ ಗಮನ ಹರಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
 
ಬಿಟಿಎಸ್‌-25ಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಇಲ್ಲಿ ಏರ್ಪಡಿಸಿದ್ದ ರೋಡ್‌ಶೋ ಮತ್ತು ಉದ್ಯಮಿಗಳೊಂದಿಗಿನ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
ಬೆಂಗಳೂರು ತಂತ್ರಜ್ಞಾನ ಸಮಾವೇಶವು ಈ ಬಾರಿ ಬೆಂಗಳೂರು ಅರಮನೆ ಆವರಣದಲ್ಲಿ ಭೌತಿಕ ಸ್ವರೂಪದಲ್ಲಿ ನಡೆಯಲಿದೆ. ಇಲ್ಲಿ ಭವಿಷ್ಯದ ಸಂಚಾರ ವ್ಯವಸ್ಥೆ, ಜೀನ್‌ ಎಡಿಟಿಂಗ್, ಬಯೋಫಾರ್ಮಾ, ಕ್ಲೀನ್‌ ಟೆಕ್ನಾಲಜಿ, ಏರೋಸ್ಪೇಸ್‌ ಮತ್ತು ಇಎಸ್‌ಜಿ ವಲಯ ಕುರಿತು ಪರಿಣತರು ಮತ್ತು ಉದ್ಯಮಿಗಳು ಚರ್ಚಿಸಲಿದ್ದಾರೆ ಎಂದು ಅವರು ವಿವರಿಸಿದರು.
 
ಆಧುನಿಕ ತಂತ್ರಜ್ಞಾನ ಧಾರೆಗಳ ಸಂಶೋಧನಾ ಕೇಂದ್ರಗಳು ರಾಜ್ಯದಲ್ಲಿ ನೆಲೆಯೂರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ. ಸಮಕಾಲೀನ ಉದ್ದಿಮೆಗಳಿಗೆ ನಾವು ತೆರೆದುಕೊಂಡಿದ್ದು,  ಇದಕ್ಕಾಗಿ ಜಗತ್ತಿನ ಪ್ರಮುಖ ಆವಿಷ್ಕಾರ ತಾಣಗಳೊಂದಿಗೆ ಜಾಗತಿಕ ನಾವೀನ್ಯತಾ ಸಹಭಾಗಿತ್ವ ಉಪಕ್ರಮದಡಿ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಉತ್ಸುಕವಾಗಿದ್ದೇವೆ ಎಂದು ಅವರು ತಿಳಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್