ಬೆಂಗಳೂರು: ಮಂಗಳೂರಿನ ಕೋಟೆಕಾರ್‌ನಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಮಂತ್ರಿ ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ಚೆನ್ನಾಗಿದೆ ಎಂದರು.
ಬಿಜೆಪಿಯವರು ಸುಮ್ಮನೇ ಆರೋಪ ಮಾಡುತ್ತಿದ್ದಾರೆ. ಸಮಯ ಬಂದಾಗ ಅಂಕಿ ಅಂಶ ಕೊಡುತ್ತೇನೆ ಎಂದರು.
ಮಂಗಳೂರಿನ ಕೋಟೆಕಾರ್‌ನಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ರಾಜ್ಯದ ಇತಿಹಾಸದಲ್ಲಿ ನಡೆದ ಅತ್ಯಂತ ದೊಡ್ಡ ದರೋಡೆ ಪ್ರಕರಣ ಎಂದಿದ್ದರು.
ಕಾನೂನನ್ನು ನಿಭಾಯಿಸುವಲ್ಲಿ ಸೋತಿರುವ ಪರಮೇಶ್ವರ್ ಅವರು ರಾಜೀನಾಮೆ ನೀಡಿ, ಸೂಕ್ತ ವ್ಯಕ್ತಿಗೆ ಗೃಹಮಂತ್ರಿ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದ್ದರು. ಇದೀಗ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ದರೋಡೆ ನಡೆಯುವುದು ಮುಂಚೆನೇ ಗೊತ್ತಾದ್ರೆ ತಡೆಯಬಹುದು. ಮಂಗಳೂರು ದರೋಡೆ ಪ್ರಕರಣ ನಡೆದಾಗ ಅಲ್ಲಿ ಸೆಕ್ಯೂರಿಟಿ ಗಾರ್ಡ್ ಇರಲಿಲ್ಲ. ಈ ರೀತಿ ಆದಾಗ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುಂದು ತಪ್ಪಾಗುತ್ತದೆ.