ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಭೂ ಕಬಳಿಕೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ, ಎನ್.ಆರ್.ರಮೇಶ್ ದೂರು ದಾಖಲಿಸಿದ್ದಾರೆ,
ಬನ್ನೇರುಘಟ್ಟ ರಸ್ತೆಯ ಬೇಗೂರು ಗ್ರಾಮದಲ್ಲಿ ಕ್ರಯಪತ್ರವಿಲ್ಲದ 14 ಎಕರೆ ಭೂಮಿ ಒತ್ತುವರಿ ಮತ್ತು 850 ಕೋಟಿ ಮೌಲ್ಯ ಬೆಲೆಬಾಳುವ 33.37 ಎಕರೆ ಭೂಮಿಯನ್ನು ಕಬಳಿಸಿದ್ದಾರೆ ಎಂದು 2350 ಪುಟಗಳ ದಾಖಲೆ ಬಿಡುಗಡೆಗೊಳಿಸಿದ್ದಾರೆ. ಸರಕಾರಿ ಜಾಗಕ್ಕೆ ನಕಲಿ ಮ್ಯೂಟೇಶನ್ ರಿಜಿಸ್ಟಾರ್ ಕೂಡಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಬರ್ಟ್ ವಾದ್ರಾ ಪಾಲುದಾರಿಕೆಯ ಡಿಎಲ್ಎಫ್ ಸಂಸ್ಥೆ 64 ಎಕರೆ ಪ್ರದೇಶದಲ್ಲಿ ಬೃಹತ್ ವಸತಿ ಸಮಚ್ಚಯಗಳು ನಿರ್ಮಿಸಿದ್ದು ಒಟ್ಟು 74 ಎಕರೆ ಭೂಮಿಯನ್ನು ಕಬಳಿಸಲಾಗಿದೆ ಎಂದು ದೂರಿದ್ದಾರೆ.
ಭೂಕಬಳಿಕೆ ನಿಗ್ರಹ ವಿಶೇಷ ಕೋರ್ಟ್, ಬಿಎಂಟಿಎಫ್ ಪೊಲೀಸ್ ಠಾಣೆ, ಡಿಸಿ ಕಚೇರಿ ಮತ್ತು ಎಸಿಬಿ ಅಧಿಕಾರಿಗಳಿಗೆ ಹಾಗೂ ಜಾರಿ ನಿರ್ದೇಶನಾಲಯಕ್ಕೂ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ಸಲ್ಲಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.