ಸುಮಲತಾ ಅಂಬರೀಶ್ ಗೆ ಕೈ ಕೊಟ್ಟ ರಾಕಿಂಗ್ ಸ್ಟಾರ್ ಯಶ್

Krishnaveni K
ಸೋಮವಾರ, 4 ಮಾರ್ಚ್ 2024 (10:45 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವ ತಯಾರಿಯಲ್ಲಿರುವ ಸುಮಲತಾ ಅಂಬರೀಶ್ ಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈ ಹಿಡಿಯುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎನ್ನುವುದು ಇನ್ನೂ ಪಕ್ಕಾ ಆಗಿಲ್ಲ. ಆದರೆ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ತಾನೇ ಕಣಕ್ಕಿಳಿಯಲಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಿ ತಯಾರಿಯನ್ನೂ ಶುರು ಮಾಡಿದ್ದಾರೆ.

ಕಳೆದ ಬಾರಿ ಸುಮಲತಾ ಇದೇ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆಗ ದರ್ಶನ್ ಮತ್ತು ಯಶ್ ಜೋಡೆತ್ತುಗಳಂತೆ ಸುಮಲತಾಗೆ ಬೆಂಬಲವಾಗಿ ನಿಂತಿದ್ದರು. ಆದರೆ ಈ ಬಾರಿ ದರ್ಶನ್ ಬರಬಹುದಾದರೂ ಟಾಕ್ಸಿಕ್ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಯಶ್ ಬರಲ್ಲ ಎನಿಸುತ್ತಿದೆ.

ಈಗಾಗಲೇ ಮಾಧ್ಯಮಗಳ ಮುಂದೆ ಯಶ್, ತಮಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದಿದ್ದರು. ಯಶ್ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಮಲತಾ ‘ಕಳೆದ ಬಾರಿ ಚುನಾವಣೆ ಪ್ರಚಾರಕ್ಕೆ ಬಂದಿದ್ದಾಗ ಬೇರೆ ಪಕ್ಷದ ನಾಯಕರು ಅವರ ವಿರುದ್ಧ ಟೀಕೆಎ ಮಾಡಿದ್ದರು. ಈ ಬಗ್ಗೆ ಅವರಿಗೆ ತುಂಬಾ ಬೇಸರವಿದೆ. ಆಗಲೇ ಮೂರು ನಾಲ್ಕು ಬಾರಿ ಈ ಬಗ್ಗೆ ಮಾತನಾಡಿದ್ದರು. ರಾಜಕಾರಣ ಎಂದರೆ ಇಷ್ಟು ಕಹಿಯೇ ಎಂದು ಬೇಸರಿಸಿಕೊಂಡಿದ್ದರು. ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಅವರು ತುಂಬಾ ಬ್ಯುಸಿಯಾಗಿದ್ದಾರೆ. ಹೀಗಾಗಿ ಈಗ ಮತ್ತೆ ಅವರಿಂದ ಪ್ರಚಾರ ನಿರೀಕ್ಷೆ ಮಾಡಲು ಸಾಧ‍್ಯವಿಲ್ಲ’ ಎಂದಿದ್ದಾರೆ. ಹೀಗಾಗಿ ಈ ಬಾರಿ ಸುಮಲತಾ ಪರ ಯಶ್ ಪ್ರಚಾರಕ್ಕಿಳಿಯಲ್ಲ ಎನ್ನುವುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments