Daily Horoscope
✕

ಮತ್ತೆ ಸಂಕಷ್ಟದಲ್ಲಿ ರೋಹಿಣಿ ಸಿಂಧೂರಿ!?

Webdunia
ಗುರುವಾರ, 24 ಮಾರ್ಚ್ 2022 (07:36 IST)
ಮೈಸೂರು : ಐಎಎಸ್ ಅಧಿಕಾರಿ  ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
 
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಆಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೂಡಲೇ ಪ್ರಕರಣದ ತನಿಖೆ ಮಾಡಿ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಪೌರಾಡಳಿತ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ 10-13 ರೂಪಾಯಿಗೆ ಸಿಗುವ ಬಟ್ಟೆ ಬ್ಯಾಗ್ಗೆ 52 ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಕೂಡ ಪಡೆದಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

ಆದರೂ ಪಟ್ಟು ಬಿಡದ ಶಾಸಕ ಸಾ.ರಾ.ಮಹೇಶ್ ಅವರು ಬಟ್ಟೆ ಬ್ಯಾಗ್ ಅವ್ಯವಹಾರಗಳ ಬಗ್ಗೆ ಸದನದಲ್ಲಿ ಗಮನ ಸೆಳೆದಿದ್ದರು. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ನಾಯಕರಿಗೆ ಲಾಕ್… ಸೌರವ್ ದಾಸ್, ಆಶುತೋಷ್ ರಂಕಾ ಬಂಧನ ವಿಸ್ತರಣೆಯಾಗಿದ್ದು ಇದೇ ಕಾರಣಕ್ಕೆ

ಮತಾಂತರವಾಗು, ನಮಾಜ್ ಮಾಡು.. ಇಲ್ಲಾಂದ್ರೆ ಕೆರಿಯರ್ ಮುಗಿಸಿಬಿಡ್ತೀನಿ: ವಿದ್ಯಾರ್ಥಿಗಳಿಗೆ ಪ್ರೊಫೆಸರ್ ನಿಂದಲೇ ಬೆದರಿಕೆ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments