Select Your Language

Notifications

webdunia
webdunia
webdunia
webdunia

ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಕೊಕ್!

rohith chakrathirtha puc text book commitee ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿ ರೋಹಿತ್ ಚಕ್ರತೀರ್ಥ
bengaluru , ಮಂಗಳವಾರ, 7 ಜೂನ್ 2022 (16:48 IST)
ರಾಜ್ಯಾದ್ಯಂತ ಭಾರೀ ವಿವಾದ ಹಾಗೂ ವ್ಯಾಪಕ ಟೀಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪಿಯು ಪಠ್ಯ ಪರಿಷ್ಕರಣಾ ಸಮಿತಿಯಿಂದ ರೋಹಿತ್‌ ಚಕ್ರತೀರ್ಥ ಅವರನ್ನು ಕೈಬಿಟ್ಟು ಆದೇಶ ಹೊರಡಿಸಿದೆ.
ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡಿತ್ತು. ಆದರೆ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮತ್ತೆ ರೋಹಿತ್ ಚಕ್ರತೀರ್ಥಗೆ ವಹಿಸಿದ್ದು ಸಾಹಿತಿಗಳು ಮತ್ತು ಇನ್ನಿತರೆ ಪ್ರಗತಿಪರರರು ವಿರೋಧಿಸಿದರ ಬೆನ್ನಲ್ಲೇ ಈಗ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ರಾಜ್ಯ ಸರ್ಕಾರ ಗೇಟ್‌ ಪಾಸ್ ನೀಡಿದೆ.
ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಸತತವಾಗಿ ಪ್ರಾಧ್ಯಾಪಕನಿಂದ ರೇಪ್‌!