Publish Date: Tue, 26 Oct 2021 (10:57 IST)
Updated Date: Tue, 26 Oct 2021 (11:03 IST)
ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲವೆಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ.
ಜಾತಿವಾದಿಯೆಂದು ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು. ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ ಜಾತ್ಯತೀತರಾ? ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾತಿವಾದಿಯೇ ? ಜಾತ್ಯತೀತವಾದಿಯೇ? ಅಂತ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ..