Select Your Language

Notifications

webdunia
webdunia
webdunia
webdunia

ರೌಡಿಶೀಟರ್‌ನನ್ನು ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ‌ ಹಲ್ಲೆ

webdunia
bangalore , ಸೋಮವಾರ, 27 ಸೆಪ್ಟಂಬರ್ 2021 (21:53 IST)
ಬೆಂಗಳೂರು: ರೌಡಿಶೀಟರ್‌ನನ್ನು ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಕಾಲಿಗೆ ಗುಂಡು ಹಾರಿಸಿ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಕೆಜಿಹಳ್ಳಿಯ ರೌಡಿಶೀಟರ್ ಸ್ಟಾಲಿನ್ ಗುಂಡೇಟಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಹೆಡ್‌ ಕಾನ್​ಸ್ಟೇಬಲ್‌ ಮಹೇಶ್ ಗಾಯಗೊಂಡಿದ್ದಾರೆ.
ಸೆ.12ರಂದು ಹತ್ಯೆಯಾದವನು ಯಾರು ಎಂಬುದನ್ನು ಪತ್ತೆ ಹಚ್ಚುವುದಕ್ಕೂ ಪೊಲೀಸರು ಹರಸಾಹಸ ಪಟ್ಟಿದ್ದರು. ಅಷ್ಟರಮಟ್ಟಿಗೆ ಮುಖದ ಗುರುತು ಸಹ ಸಿಗದಂತೆ ಕೆಜಿಹಳ್ಳಿ ಠಾಣೆಯ ರೌಡಿಶೀಟರ್ ಅರವಿಂದ್ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಹೆಣವಾಗಿದ್ದ.
ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು: ಘಟನೆ ಸಂಬಂಧ ಪ್ರಕರಣದಲ್ಲಿ ಆರೋಪಿಗಳಾದ ಸ್ಟಾಲಿನ್, ಅರುಣ್, ವಿಜಯ್ ಕುಮಾರ್ ಹಾಗೂ ಜಾಕ್ ಲೂಯಿಸ್ ಎಂಬ ನಾಲ್ವರನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದರು.‌ ಸೋಮವಾರ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ‌ ಪರಾರಿಯಾಗಲು ಸ್ಟಾಲಿನ್ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅರ್ಕಾವತಿ ಬಡಾವಣೆಯ ಭೂಸ್ವಾಧೀನವನ್ನು ಎತ್ತಿ ಹಿಡಿದಿರುವ ಹೈಕೋರ್ಟ್