ರೌಡಿಶೀಟರ್‌ನನ್ನು ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ‌ ಹಲ್ಲೆ

Webdunia
ಸೋಮವಾರ, 27 ಸೆಪ್ಟಂಬರ್ 2021 (21:53 IST)
ಬೆಂಗಳೂರು: ರೌಡಿಶೀಟರ್‌ನನ್ನು ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಕಾಲಿಗೆ ಗುಂಡು ಹಾರಿಸಿ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಕೆಜಿಹಳ್ಳಿಯ ರೌಡಿಶೀಟರ್ ಸ್ಟಾಲಿನ್ ಗುಂಡೇಟಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಹೆಡ್‌ ಕಾನ್​ಸ್ಟೇಬಲ್‌ ಮಹೇಶ್ ಗಾಯಗೊಂಡಿದ್ದಾರೆ.
ಸೆ.12ರಂದು ಹತ್ಯೆಯಾದವನು ಯಾರು ಎಂಬುದನ್ನು ಪತ್ತೆ ಹಚ್ಚುವುದಕ್ಕೂ ಪೊಲೀಸರು ಹರಸಾಹಸ ಪಟ್ಟಿದ್ದರು. ಅಷ್ಟರಮಟ್ಟಿಗೆ ಮುಖದ ಗುರುತು ಸಹ ಸಿಗದಂತೆ ಕೆಜಿಹಳ್ಳಿ ಠಾಣೆಯ ರೌಡಿಶೀಟರ್ ಅರವಿಂದ್ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಹೆಣವಾಗಿದ್ದ.
ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು: ಘಟನೆ ಸಂಬಂಧ ಪ್ರಕರಣದಲ್ಲಿ ಆರೋಪಿಗಳಾದ ಸ್ಟಾಲಿನ್, ಅರುಣ್, ವಿಜಯ್ ಕುಮಾರ್ ಹಾಗೂ ಜಾಕ್ ಲೂಯಿಸ್ ಎಂಬ ನಾಲ್ವರನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದರು.‌ ಸೋಮವಾರ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ‌ ಪರಾರಿಯಾಗಲು ಸ್ಟಾಲಿನ್ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಏಳು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ: ಬಂದೇಬಿಡ್ತು ಗ್ರಾಹಕರು ನಿಟ್ಟುಸಿರು ಬಿಡುವ ವರದಿ

ಬಂಧನ ಭೀತಿಯಿಂದ ತಲೆಮರೆಸಿಕೊಂಡ್ರಾ ಶಾಸಕ ಬೈರತಿ ಬಸವರಾಜ್

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ಪಲ್ಸ್ ಪೋಲಿಯೋ ಹಾಕಿಸಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆ ಶಿವಕುಮಾರ್ ಗುಣಗಾನ

ಮುಂದಿನ ಸುದ್ದಿ
Show comments