ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿದ ಕಿಡಿಗೇಡಿಗಳು ಅಂದರ್

Webdunia
ಮಂಗಳವಾರ, 5 ಅಕ್ಟೋಬರ್ 2021 (21:34 IST)
ಬೆಂಗಳೂರು: ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ರೌಡಿ ಮತ್ತು ಆತನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಲ್ಸನ್ ಗಾರ್ಡನ್‌ನ ರೌಡಿ ಡೇವಿಡ್ ಮತ್ತು ಆತನ ಸಹಚರರಾದ ಮಂಜುನಾಥ್ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ.
ಆಟೋ ಚಾಲಕರೊಬ್ಬರ ಪುತ್ರಿಯನ್ನು ರೌಡಿ ಡೇವಿಡ್ ಎಂಬಾತ​ ಪ್ರೀತಿಸುತ್ತಿದ್ದ. ಈ ವಿಚಾರ ಯುವತಿಯ ತಂದೆಗೆ ತಿಳಿದು ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದರು. ಆದರೂ ಸುಮ್ಮನಾಗಿರಲಿಲ್ಲ. ಎರಡು ದಿನಗಳ ಹಿಂದೆ ಯುವತಿ ಹುಟ್ಟುಹಬ್ಬವೆಂದು ಆಕೆಯ ಮನೆ ಮುಂದೆ ಕೇಕ್ ಕತ್ತರಿಸಿದ್ದಾನೆ. ಈ ವೇಳೆ ಯುವತಿಯ ತಂದೆ ಮತ್ತು ಡೇವಿಡ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೆರಳಿದ ಡೇವಿಡ್ ತನ್ನ ಪ್ರೀತಿಗೆ ಯುವತಿಯ ತಂದೆ ಅಡ್ಡಿಯಾಗುತ್ತಿದ್ದಾನೆ ಎಂದು ಕೊಲೆಗೆ ನಿರ್ಧರಿಸಿದ್ದ.
ಹಲವು ಬಾರಿ ಯುವತಿಯ ಮನೆ ಬಳಿ ತೆರಳಿ ಕೊಲೆಗೆ ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಭಾನುವಾರ ರಾತ್ರಿ ಮತ್ತೆ ಹತ್ಯೆಗೆ ಸಜ್ಜಾಗಿದ್ದರು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments