Publish Date: Tue, 19 Apr 2022 (21:24 IST)
Updated Date: Tue, 19 Apr 2022 (21:26 IST)
ಬಿಜೆಪಿ ಸರ್ಕಾರ ರೌಡಿಗಳು ಸತ್ರೆ 25 ಲಕ್ಷ ರೂ. ಪರಿಹಾರ ಕೊಡುತ್ತೆ. ಆದರೆ ಪಾಪ ಗುತ್ತಿಗೆದಾರ ಸಂತೋಷ್ ಪಾಟೀಲ್‍ಗೆ ಯಾಕೆ ಪರಿಹಾರ ಕೊಟ್ಟಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ರಾಜೀನಾಮೆ ತಗೊಂಡು ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಿದ್ದೀರಿ. ಆದ್ರೆ ಸತ್ತ ಸಂತೋಷ್ ಪಾಟೀಲ್‍ಗೆ ಯಾಕೆ ಪರಿಹಾರ ಕೊಟ್ಟಿಲ್ಲ. ರೌಡಿಗಳು ಸತ್ರೆ 25 ಲಕ್ಷ ರೂ. ಕೊಡ್ತೀರಿ. ಸಂತೋಷ್ ಪಾಟೀಲ್ ಅವರಿಗೆ ಕೂಡಲೇ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.