Publish Date: Tue, 10 Feb 2026 (19:33 IST)
Updated Date: Tue, 10 Feb 2026 (19:36 IST)
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾಗೊಂಡಿದ್ದು, ಬಿಜೆಪಿ ಶಾಸಕರಿಗೆ ಬಂಧನದ ಭೀತಿ ಶುರುವಾಗಿದೆ.
ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾರೆ.
ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು.
ಸದ್ಯ, ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರು ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಲ್ಲಿದೆ.
ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರಿಂದ ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.