Publish Date: Fri, 19 Dec 2025 (18:57 IST)
Updated Date: Fri, 19 Dec 2025 (19:00 IST)
ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣ ಸಂಬಂಶ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿತ್ತು.
ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು ಹೆಸರಿಸಲಾದ ಶಾಸಕ ಬೈರತಿ ಬಸವರಾಜನ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
ಬಂಧನಕ್ಕೆ ಒಳಗಾಗಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್, ಬಸವರಾಜ್ ಅವರಿಗೆ ನಿರೀಕ್ಷಣಾ ಜಾಮೀನಿಗೆ ನಿರಾಕರಿಸಿದ್ದಾರೆ.
ಸೂಕ್ತ ಅರ್ಜಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ನ್ಯಾಯಾಲಯ ಸೂಚಿಸಿದೆ. ಗಮನಾರ್ಹವೆಂದರೆ, ಬಂಧನದಿಂದ ಯಾವುದೇ ಮಧ್ಯಂತರ ರಕ್ಷಣೆಯನ್ನು ನೀಡಲು ಹೈಕೋರ್ಟ್ ನಿರಾಕರಿಸಿತು.
ಇದರಿಂದ ತನಿಖಾ ಸಂಸ್ಥೆಗಳು ತನಿಖೆಯ ಭಾಗವಾಗಿ ಶಾಸಕರನ್ನು ಕರೆಸುವ ಅಥವಾ ಬಂಧಿಸುವ ಹಾದಿಯನ್ನು ಸುಗಮಗೊಳಿಸಿತು.