Publish Date: Wed, 17 Nov 2021 (21:47 IST)
Updated Date: Wed, 17 Nov 2021 (21:50 IST)
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪಳನಿ ಅಲಿಯಾಸ್ ಕರ್ಚೀಫ್ ಪಳನಿ ಬಂಧಿತ ರೌಡಿಶೀಟರ್.
ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಅಡಗಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ರೌಡಿ ನಿಗ್ರಹದಳದ ಎಸಿಪಿ ಹೆಚ್.ಎಸ್.ಪರಮೇಶ್ವರ್ ಹಾಗೂ ಇನ್ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಈತನ ಬಂಧನ ವೇಳೆ ಇನ್ಸ್ಪೆಕ್ಟರ್ ಹರೀಶ್ ಕುಮಾರ್ ಅವರ ಎಡಗೈ ಡ್ರ್ಯಾಗರ್ನಿಂದ ಚುಚ್ಚಿದ್ದ. ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಎಸಿಪಿ ಮೇಲೆಯೆ ಹಲ್ಲೆಗೆ ಮುಂದಾಗಿದ್ದ. ಆತ್ಮ ರಕ್ಷಣೆಗಾಗಿ ಸರ್ವೀಸ್ ಪಿಸ್ತೂಲ್ನಿಂದ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆ ಸೇರಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.