Webdunia - Bharat's app for daily news and videos

Install App

20ಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್

Webdunia
ಬುಧವಾರ, 17 ನವೆಂಬರ್ 2021 (21:47 IST)
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪಳನಿ ಅಲಿಯಾಸ್ ಕರ್ಚೀಫ್ ಪಳನಿ ಬಂಧಿತ ರೌಡಿಶೀಟರ್.
ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಅಡಗಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ರೌಡಿ ನಿಗ್ರಹದಳದ ಎಸಿಪಿ ಹೆಚ್.ಎಸ್‌.ಪರಮೇಶ್ವರ್ ಹಾಗೂ ಇನ್ಸ್​ಪೆಕ್ಟರ್​ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಈತನ ಬಂಧನ ವೇಳೆ ಇನ್ಸ್​ಪೆಕ್ಟರ್ ಹರೀಶ್ ಕುಮಾರ್ ಅವರ ಎಡಗೈ ಡ್ರ್ಯಾಗರ್​​ನಿಂದ ಚುಚ್ಚಿದ್ದ. ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಎಸಿಪಿ ಮೇಲೆಯೆ ಹಲ್ಲೆಗೆ‌ ಮುಂದಾಗಿದ್ದ. ಆತ್ಮ ರಕ್ಷಣೆಗಾಗಿ ಸರ್ವೀಸ್ ಪಿಸ್ತೂಲ್​​ನಿಂದ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆ ಸೇರಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments