Select Your Language

Notifications

webdunia
webdunia
webdunia
webdunia

ಪರಾರಿಯಾಗಲು ಯತ್ನಿಸಿದ ರೌಡಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ರು!

ರೌಡಿ
ಪೊಲೀಸ್ ಜೀಪಿನಿಂದ ಇಳಿದು ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಲು ಯತ್ನಿಸಿದ ಭೂಪನ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಕೊಲೆ ಆರೋಪಿಯನ್ನು ತೋರಿಸುವುದಾಗಿ ಕುಖ್ಯಾತ ರೌಡಿ ಅರುಣ್ ಪೊಲೀಸ್ ಜೀಪಿನಿಂದ ಇಳಿದು ಕಲ್ಲಿನಿಂದ ಕೆಂಗೇರಿ ಠಾಣೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದನು. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ತಕ್ಷಣ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನ ಚಿಕ್ಕಪ್ಪ ಲೇಔಟ್ ನ ರೌಡಿ ಅರುಣ್ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೆಂಗೇರಿ ಪೊಲೀಸರು ಪರಾರಿಯಾಗಲು ಯತ್ನಿಸಿದ್ದ ರೌಡಿಯನ್ನು ಬಂಧಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೇರಳ, ಕೊಡಗು ನೆರೆಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹಿಸಿದ ಆರ್.ಎಸ್.ಎಸ್