Publish Date: Tue, 29 Sep 2020 (20:05 IST)
Updated Date: Tue, 29 Sep 2020 (20:08 IST)
ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ ಎದುರಾಗಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷಗಳು ತೊಡಗಿಕೊಂಡಿವೆ.
ಈ ನಡುವೆ ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್ ಸಿಗೋದು ಪಕ್ಕಾ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಮಾಜಿ ಶಾಸಕ ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರಕಾರ ರಚನೆಗೆ ಕಾರಣವಾಗಿದ್ದರು.
ಅವರಿಗೆ ಬಿಜೆಪಿ ನಾಯಕರು ಭರವಸೆ ನೀಡಿದಂತೆ ಟಿಕೆಟ್ ಕೊಡುತ್ತಾರೆ ಎಂದು ಸಚಿವ ಡಾ.ಸುಧಾಕರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.