ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅತಿ ಹೆಚ್ಚು ಜನಸಂಖ್ಯೆ ಇರುವ 150 ಗ್ರಾಮಗಳನ್ನು ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು ಗ್ರಾಮಗಳಲ್ಲಿ ಶೇ. 50 ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿರುವ ಅವರಿಗೂ ಮತ್ತು ಇತರೆ ವರ್ಗದವರಿಗೂ ಮೂಲ ಸೌಕರ್ಯ ಕಲ್ಪಿಸಲು ಗ್ರಾಮಿಣಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.