Webdunia - Bharat's app for daily news and videos

Install App

20 ಸಾವಿರ ಕೋಟಿ ಲೂಟಿ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು

Webdunia
ಬುಧವಾರ, 24 ಮೇ 2017 (14:04 IST)
ದೇವೇಗೌಡರ ಕುಟುಂಬ 20 ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ ಹೊಡೆದಿದೆ ಎಂದು ದೂರು ನೀಡಿದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್‌ಗೌಡನಿಗೆ ವಿಳಾಸವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವೆಂಕಟೇಶ್ ಗೌಡ್ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದಲ್ಲಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನನ್ನ ವಿರುದ್ಧ ಐಟಿಗೆ ದೂರು ಕೊಡಿಸಿದ್ದಾರೆ ಎನ್ನುವುದು ಗೊತ್ತಿದೆ. ಬಿಜೆಪಿ ಕಚೇರಿಯಲ್ಲಿಯೇ ದೂರು ಟೈಪ್ ಮಾಡಲಾಗಿದೆ ಎನ್ನುವುದೂ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಎರಡು ರಾಜಕೀಯ ಪಕ್ಷಗಳು ಬೇಡ ಎನ್ನುವ ತೀರ್ಮಾನಕ್ಕೆ ಜನತೆ ಬಂದಿದ್ದಾರೆ. ಜೆಡಿಎಸ್ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಜನತೆಗೆ ನನ್ನ ಮೇಲೆ ಸಂಶಯ ಮೂಡಲಿ ಎನ್ನುವ ಕಾರಣಕ್ಕೆ ಬಿಎಸ್‌ವೈ ಐಟಿ ಇಲಾಖೆಗೆ ದೂರು ಕೊಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ನನ್ನ ವಿರುದ್ಧ ಐಟಿಗೆ ದೂರು ಕೊಡಿಸಲು ಬಿಎಸ್‌ವೈ ಕಾರಣರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments