ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್; ಸಚಿವರ ಹಸ್ತಕ್ಷೇಪ ಇಲ್ಲ ಎಂದ ಸಚಿವ ಶಿವಳ್ಳಿ

ಶನಿವಾರ, 12 ಜನವರಿ 2019 (12:19 IST)
ಕೊಪ್ಪಳ : ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣ ತನಿಖೆ ನಡೆಸಲಾಗುತ್ತದೆ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೇಳಿದ್ದಾರೆ.


ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಸಿ.ಪುಟ್ಟರಂಗಶೆಟ್ಟಿ ಕಚೇರಿಯ ಸಿಬ್ಬಂದಿ ತಪ್ಪು ಮಾಡಿದ್ದಾನೆ. ಆದರೆ ಈ ಪ್ರಕರಣದಲ್ಲಿ ಸಚಿವರ ಹಸ್ತಕ್ಷೇಪ ಇಲ್ಲ. ಯಾರೇ ತಪ್ಪು ಮಾಡಿದ್ರು ತನಿಖೆ ನಂತರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


ಹಾಗೇ ‘6 ತಿಂಗಳಲ್ಲಿ ಮೈತ್ರಿ ಸರ್ಕಾರ ಬೀಳುತ್ತೆ ಎಂದು ಹೇಳ್ತಿದ್ದಾರೆ. ಆದ್ರೆ 5 ವರ್ಷ ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗುವುದಿಲ್ಲ’ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸರ್ಕಾರಿ ಅಧಿಕಾರಿಗಳ ಮೇಲೆ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ದರ್ಪ