Publish Date: Tue, 27 Dec 2016 (10:49 IST)
Updated Date: Tue, 27 Dec 2016 (10:52 IST)
ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಐದು ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಾಗೆಯೇ ಬೆಳ್ಳಿ ಮತ್ತು ಕಂಚು ಪದಕ ಗೆಲ್ಲುವವರಿಗೂ ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ಬೆಳ್ಳಿ ಪದಕ ವಿಜೇತರಿಗೆ ರೂ.3 ಮತ್ತು ಕಂಚಿನ ಪದಕ ಗೆಲ್ಲುವವರಿಗೆ ರೂ. 2 ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು ಎಂದು ಒಲಿಂಪಿಕ್ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದಲ್ಲಿ ನಡೆದ ಕರ್ನಾಟಕ ಒಲಿಂಪಿಕ್ ಸಂಸ್ಥೆ ಸಮಾರಂಭದಲ್ಲಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವರುಗಳಾದ ಪ್ರಮೋದ್ ಮದ್ವರಾಜ್, ಕೆ ಜೆ ಜಾರ್ಜ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.