Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ: ಅಶ್ವತ್ಥ್​ ನಾರಾಯಣ್

Webdunia
ಶುಕ್ರವಾರ, 24 ಡಿಸೆಂಬರ್ 2021 (18:26 IST)
ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ಆರ್​​ಎಸ್​ಎಸ್ ದೇಶದ ಅಭಿವೃದ್ಧಿ ಬಯಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಕೂಡ ಆರ್​​ಎಸ್​ಎಸ್​ ಅಜೆಂಡಾ ಎಂಬುದಾಗಿ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ. ಮತಾಂತರ ನಿಷೇಧ ಮಸೂದೆ ಮಂಡನೆಯ ಬಳಿಕ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಈ ಕಾನೂನು ಸಮಾಜ‌ದ ಪರವಾಗಿದೆ. ಮತಾಂತರ ನಿಷೇಧದ ಬಗ್ಗೆ ಸಂವಿಧಾನದಲ್ಲೇ ಇದೆ. ಹೆಚ್ಚಿನ ಸ್ಪಷ್ಟತೆ ಕೊಡೋದಕ್ಕೆ ಈ ಕಾಯ್ದೆ ಜಾರಿಗೆ ತಂದಿದ್ದೇವೆ. ಇದು ಆರ್​ಎಸ್ಎಸ್ ಅಜೆಂಡಾ ಎಂದು ಒಪ್ಪಿಕೊಳ್ಳುತ್ತೇನೆ ಎಂದರು. ಯಾವುದೇ ಆಮಿಷಕ್ಕೆ, ಒತ್ತಡಕ್ಕೆ ಒಳಗಾಗಿ ಮತಾಂತರ ಆಗಬಾರದು. ಇದು ಸಮಾಜದ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಈ ಮಸೂದೆ ಜಾರಿಗೆ ತರಬೇಕು ಎಂದು ಈ ಹಿಂದೆ ಪ್ರಯತ್ನಿಸಿದ್ದರು. ಸಮಾಜಕ್ಕೆ ಒಳಿತಾಗುವ ಮಸೂದೆ ಇದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments