Select Your Language

Notifications

webdunia
webdunia
webdunia
Thursday, 13 March 2025
webdunia

ಆರ್‌ಎಸ್‌ಎಸ್ ನಿಷೇಧ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ– ಸಿಎಂ

ಆರ್‌ಎಸ್‌ಎಸ್ ನಿಷೇಧ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ– ಸಿಎಂ
ಶಿವಮೊಗ್ಗ , ಶನಿವಾರ, 6 ಜನವರಿ 2018 (15:17 IST)
ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧ ಮಾಡಲಾಗುವುದು ಎಂದು ನಾನು ಎಲ್ಲಿಯೂ ಹೇಳಿಲ್ಲ. ಸಮಾಜದಲ್ಲಿ ಶಾಂತಿ– ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇನೆ ಎಂದ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಶ್ರೀರಾಮಸೇನೆ ನಿಷೇಧ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಶ್ರೀರಾಮಸೇನೆ, ಭಜರಂಗದಳ, ವಿಎಚ್‍ಪಿ, ಪಿಎಫ್‍ಐ, ಎಸ್‍ಡಿಪಿಐ, ಕೆಎಫ್‍ಡಿ ಸೇರಿದಂತೆ ಯಾವುದೇ ಸಂಘಟನೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಸರ್ಕಾರ ಕೈಕಟ್ಟಿ ಕೂರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.
 
ಸಂಘಟನೆಗಳನ್ನು ನಿಷೇಧಿಸುವ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ. ಅಗತ್ಯವಿದ್ದರೆ ಸಂಘಟನೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ಯಾರೇ ಕಾನೂನನ್ನು ಕೈಗೆತ್ತಿಕೊಂಡರೆ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕ್ಷೇತ್ರ ಬದಲಾವಣೆಗೆ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ– ಸಚಿವ ಮಹದೇವಪ್ಪ