Publish Date: Sat, 15 Aug 2026 (13:04 IST)
Updated Date: Sat, 15 Aug 2026 (13:05 IST)
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ, ರಿಜಿಸ್ಟ್ರೇಷನ್ ಮಾಡಿಸಿಕೊಂಡ ಸಂಘಟನೆಗಳು ಏನೇನ್ ಮಾಡುತ್ತಿವೆ ಎಂದು ನಮಗೆ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದರು.
ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ವೇಳೆ ಆರ್‌ಎಸ್‌ಎಸ್ ನೋಂದಣಿ ಕುರಿತು ಮಾತಾಡಿದ ಬಿ ಎಲ್ ಸಂತೋಷ್ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ. ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್ ಕೊಡುಗೆಗಳೇನು ದೇಶದ ಅಭಿಮಾನಿಗಳಿಗೆ ಗೊತ್ತಿದೆ. ಆರ್‌ಎಸ್ ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ ಎಂದು ಸವಾಲು ಹಾಕಿದರು.
ನಾನೊಬ್ಬ ಬಿಜೆಪಿ ಕಾರ್ಯಕರ್ತ, ನಾನು ಇಲ್ಲಿ ರಾಜಕೀಯ ಮಾತಾಡಲು ಬಂದಿಲ್ಲ, ಆದರೆ ಇವತ್ತು ಬೆಂಗಳೂರಿನ ಶಿವಾಜಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಪ್ಪತ್ತು ವರ್ಷದಿಂದ ಹಿಂದೂ ಪ್ರತಿನಿಧಿಯನ್ನು ಶಾಸಕನಾಗಿ ಮಾಡಲು ಆಗಿಲ್ಲ. ನಾನು ಚಾಲೆಂಜ್ ಮಾಡ್ತೀನಿ, ಈ ಎರಡು ಕ್ಷೇತ್ರದಲ್ಲಿ ಹಿಂದೂ ನಾಯಕನನ್ನು ಕಾಂಗ್ರೆಸ್‌ನಿಂದ ಎಲೆಕ್ಷನ್ಗೆ ನಿಲ್ಲಿಸಿ, ಗೆಲ್ಲಿಸಿ ನೋಡೋಣ ಎಂದು ಸವಾಲೆಸಿದಿದ್ದಾರೆ.
ಪ್ರಿಯಾಂಕ ಖರ್ಗೆ ಅವರೇ ನೋಂದಣಿ ಎಲ್ಲದಕ್ಕೂ ಮಾನದಂಡ ಅಲ್ಲ. ನಿಮ್ಮ ಕುಟುಂಬ, ಗುಲ್ಬರ್ಗಕ್ಕೆ ಓಡಿ ಬಂದು ಜೀವನ ಕಟ್ಕೊಂಡಿದೆ. ನೀವು ನಿಮ್ಮ ಕುಟುಂಬ ಇಲ್ಲಿ ನೆಮ್ಮದಿ ವಾಸ ಮಾಡೋಕೆ ಹಿಂದೂಗಳು ಕಾರಣ. ಅವತ್ತು ನೀವು ಓಡಿ ಬಂದ ದಿನ ರಜಾಕರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್. ಆಗ ನಿಮ್ಮ ಪೋಲಿಸರು ಬಂದಿಲ್ಲ. ನಿಮ್ಮ ರಾಜಕಾರಣಿಗಳು ಬಂದಿಲ್ಲ. ಇದೇ ಆರ್‌ಎಸ್ಎಸ್ ಹುಡುಗರು ರಸ್ತೆಗಳಲ್ಲಿ ನಿಂತಿದ್ದರು. ಇದನ್ನು ನೀವೂ ನೆನಪಿಟ್ಟುಕೊಳ್ಳಬೇಕು ಎಂದು ಸಂತೋಷ್ ಹೇಳಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ