ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

Sampriya
ಸೋಮವಾರ, 3 ನವೆಂಬರ್ 2025 (20:35 IST)
ಬೆಂಗಳೂರು: ಈ ದೇಶದ ಬಹುಸಂಖ್ಯಾತರು ಆರ್‌ಎಸ್‌ಎಸ್ ಅನ್ನು ಅಪ್ಪಿಕೊಂಡು ಇಲ್ಲ, ಒಪ್ಪಿಕೊಂಡು ಇಲ್ಲ. ಇವರು ಈ ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡವರೂ ಅಲ್ಲ, ಅತೀತರೂ ಅಲ್ಲ ಎನ್ನುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಮತ್ತೇ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.  'ಒಂದು ಎನ್‌ಜಿಒ ಮುಖ್ಯಸ್ಥರಿಗೆ ಅತಿ ಭದ್ರತೆಯ ಪ್ರೊಟೊಕಾಲ್ ಸೆಕ್ಯೂರಿಟಿ ನೀಡಿರುವುದೇಕೆ? ಒಂದೇ ಒಂದು ರೂಪಾಯಿ ತೆರಿಗೆ ನೀಡದ ಯಕಶ್ಚಿತ್ ಎನ್‌ಜಿಒ ಮುಖ್ಯಸ್ಥನಿಗೆ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವಂತಹ ಅನಿವಾರ್ಯ ಏನಿದೆ? ಇವರ ಕೈಯ್ಯಲ್ಲೇ ದೊಣ್ಣೆ, ಬಡಿಗೆಗಳು ಇರುವಾಗ ಹೆಚ್ಚಿನ ಭದ್ರತೆ ಯಾವ ಕಾರಣಕ್ಕೆ?' ಎಂದು ಕೇಳಿದ್ದಾರೆ.

'ನಾವು ಆರ್‌ಎಸ್‌ಎಸ್‌ನಿಂದ ಹೊಣೆಗಾರಿಕೆ ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ?' ಎಂದು ವಾಗ್ದಾಳಿ ನಡೆಸಿದ್ದಾರೆ.

'ಈ ದೇಶದ ಬಹುಸಂಖ್ಯಾತರು ಆರ್‌ಎಸ್‌ಎಸ್ ಅನ್ನು ಅಪ್ಪಿಕೊಂಡು ಇಲ್ಲ, ಒಪ್ಪಿಕೊಂಡು ಇಲ್ಲ. ಇವರು ಈ ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡವರೂ ಅಲ್ಲ, ಅತೀತರೂ ಅಲ್ಲ' ಎಂದು ಹೇಳಿದ್ದಾರೆ.

    ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರ್‌ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ಮುಂದಿನ ಸುದ್ದಿ
Show comments