ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಂತರೂ ಸೋಲಿಸಲು ನಮ್ಮ ಟೀಂ ರೆಡಿಯಾಗಲಿದೆ ಎಂದು ಆರ್ ಎಸ್ಎಸ್ ಬೆಂಬಲಿಗರು ಈಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.
ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವಂತೆ ಮೊದಲು ಪತ್ರ ಬರೆದಿದ್ದೇ ಸಚಿವ ಪ್ರಿಯಾಂಕ್ ಖರ್ಗೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕಾಯಿದೆ ತರಲಾಗಿದೆ.
ಇದರ ಬೆನ್ನಲ್ಲೇ ಈಗ ಆರ್ ಎಸ್ಎಸ್ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಮರಕ್ಕಿಳಿದಿದ್ದಾರೆ. ಪ್ರಿಯಾಂಕ್ ಖರ್ಗೆ ಸದ್ಯಕ್ಕೆ ಚಿತ್ತಾಪುರದ ಶಾಸಕ. ಮುಂದೆಯೂ ಅವರು ಇಲ್ಲಿಂದಲೇ ಸ್ಪರ್ಧೆ ನಡೆಸಬಹುದು.
ಹೀಗಾಗಿ ಮುಂದಿನ ಚುನಾವಣೆಯಲ್ಲಿ ಅವರು ಚಿತ್ತಾಪುರದಿಂದ ಸ್ಪರ್ಧಿಸಿದರೆ ಮನೆ ಮನೆಗೂ ತೆರಳಿ ಪ್ರಿಯಾಂಕ್ ವಿರುದ್ಧ ಪ್ರಚಾರ ಮಾಡುವುದಾಗಿ ಆರ್ ಎಸ್ಎಸ್ ಬೆಂಬಲಿಗರು ಶಪಥ ಮಾಡುತ್ತಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಜನರಿಗೆ ಕರೆ ನೀಡುತ್ತಿದ್ದಾರೆ.