Select Your Language

Notifications

webdunia
webdunia
webdunia
webdunia

ಮುಡಾದಲ್ಲಿ ಒಂದಲ್ಲ, ಎರಡಲ್ಲ 5 ಸಾವಿರ ಕೋಟಿ ಹಗರಣ, ಸಿದ್ದರಾಮಯ್ಯ ಪಾಲೂ ಇದೆ: ಗಂಗರಾಜು ಆರೋಪ

Siddaramaiah

Krishnaveni K

ಬೆಂಗಳೂರು , ಗುರುವಾರ, 21 ನವೆಂಬರ್ 2024 (10:47 IST)
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 5 ಸಾವಿರ ಕೋಟಿ ರೂ. ಹಗರಣ ನಡೆದಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯನವರಿಗೂ ಪಾಲಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.

ಮುಡಾದಿಂದ ಅಕ್ರಮವಾಗಿ ಸೈಟು ಪಡೆದಿದ್ದಾರೆಂಬ ಪ್ರಕರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಪಾರ್ವತಿ ವಿರುದ್ಧ ದೂರು ದಾಖಲಾಗಿದ್ದು ವಿಚಾರಣೆ ಪ್ರಗತಿಯಲ್ಲಿದೆ. ಇದರ ನಡುವೆ ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತ ಜೊತೆಗೆ ಇಡಿ ಕೂಡಾ ತನಿಖೆ ನಡೆಸುತ್ತಿದೆ.

ಇದರ ನಡುವೆ ಈಗ ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಸ್ಪೋಟಕ ಆರೋಪ ಮಾಡಿದ್ದಾರೆ. 5 ಸಾವಿರ ಕೋಟಿಗೂ ಅಧಿಕ ಹಗರಣ ನಡೆದಿದೆ. ಇದರ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಿದ್ದೇನೆ ಎಂದಿದ್ದಾರೆ.

ಇದರ ಪೈಕಿ ಸಿಎಂ ಸಿದ್ದರಾಮಯ್ಯನವರದ್ದು 20-30 ಕೋಟಿ ರೂ. ಪಾಲಿದೆ. ಈ ಹಗರಣಕ್ಕೆ ಸಂಬಂಧಪಟ್ಟಂತೆ ಮುಡಾದ ವಿವಿಧ ಇಲಾಖೆಯ ಅಧಿಕಾರಿಗಳ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯ ಅಧಿಕಾರಿಗಳಿಂದ ಹಿಡಿದು ಡಿ ಗ್ರೂಪ್ ನೌಕರವರೆಗೆ ಎಲ್ಲರೂ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂಬುದು ಅವರ ಆರೋಪವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಗಯಾನದ ಅತ್ಯುನ್ನತ ನಾಗರಿಕ ಪ್ರಶಸ್ತಿ