Select Your Language

Notifications

webdunia
webdunia
webdunia
webdunia

ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟಕ್ಕೆ ಬಿಜೆಪಿ ಸಜ್ಜು

ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟಕ್ಕೆ ಬಿಜೆಪಿ ಸಜ್ಜು
ಬೆಂಗಳೂರು , ಸೋಮವಾರ, 17 ಅಕ್ಟೋಬರ್ 2016 (20:06 IST)
ಹಾಡುಹಗಲೇ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟ ನಡೆಸಲು ರಾಜ್ಯ ಬಿಜೆಪಿ ಘಟಕ ಸಜ್ಜಾಗಿದೆ.
 
ಮಾಜಿ ಡಿಸಿಎಂ ಆರ್.ಅಶೋಕ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಸರಣಿ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ನಾಳೆ ಶಿವಾಜಿನಗರದಾದ್ಯಂತ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಶವಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 19 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 
 
ಅಕ್ಟೋಬರ್ 20 ರಂದು ರಾಜ್ಯ ಬಿಜೆಪಿ ನಿಯೋಗದಿಂದ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
 
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ತಿಂಗಳ ಕನಿಷ್ಠ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ