Publish Date: Mon, 15 Oct 2018 (12:49 IST)
Updated Date: Mon, 15 Oct 2018 (12:52 IST)
ನ್ಯಾಯ ಕೊಡಿಸಬೇಕಾದ ಪೊಲೀಸರೇ ಅಮಾಯಕರನ್ನ ಬಲಿ ಪಶು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಾಯಚೂರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಅಂಧಾ ದರ್ಬಾರ್ಗೆ ಪ್ರಕರಣ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ವಿದ್ಯಾರ್ಥಿ ಮುಖಂಡರ ವಿರುದ್ಧ ರೌಡಿ ಶೀಟರ್ ಹಾಕಿ ಪೊಲೀಸ್ ಅಧಿಕಾರಿಗಳು ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ಮುಖಂಡರಾದ ನಿಂಗರಾಜ ಕಂದಗಲ್ಲ, ಜಾನಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವ ಮೂಲಕ ಹೋರಾಟಗಾರರನ್ನ ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ರಾಯಚೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಒತ್ತಡ ಇದರ ಹಿಂದೆ ಕೆಲಸ ಮಾಡಿದೆ.
ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಅಣತಿಯಂತೆ ನಡೆಯುತ್ತಿದ್ದಾರೆ. ಪ್ರಭಾವಿ ರಾಜಕಾರಣಿ ಹಾಗೂ ಎಂಎಲ್ಸಿ ಎನ್.ಎಸ್.ಭೋಸರಾಜು ಮತ್ತು ಮಾಜಿ ಶಾಸಕ ಹಂಪಯ್ಯ ನಾಯಕ ಕುಮ್ಮಕ್ಕಿನಿಂದ ರೌಡಿ ಶೀಟರ್ ಹಾಕಿದ್ದಾರೆ ಎನ್ನಲಾಗುತ್ತಿದೆ.