Select Your Language

Notifications

webdunia
webdunia
webdunia
webdunia

ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ: ರಾಜ್ಯಪಾಲರನ್ನು ಭೇಟಿಯಾದ ಸಚಿವ ಪಾಟೀಲ್

ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ: ರಾಜ್ಯಪಾಲರನ್ನು ಭೇಟಿಯಾದ ಸಚಿವ ಪಾಟೀಲ್
ಬೆಂಗಳೂರು , ಶುಕ್ರವಾರ, 20 ಮೇ 2016 (15:03 IST)
ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ವಾಪಸ್ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಬೇಟಿಮಾಡಿ ಚರ್ಚೆ ನಡೆಸಿದ್ದಾರೆ.
 
ಕಳೆದ ವಾರವಷ್ಟೇ ರಾಜ್ಯಪಾಲರು ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿ, ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದರು. ರಾಜ್ಯಪಾಲರನ್ನು ಭೇಟಿಯಾದ ಸಚಿವರು, ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ಕುರಿತು ವಿವರಣೆ ನೀಡಿದ್ದಾರೆ.
 
ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ರಂಗನಾಥ್ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ವಿವಿಗೆ ಪ್ರತ್ಯೇಕ ಕಾಯ್ದೆ ರೂಪಿಸಿ ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈ ಕಾಯ್ದೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಹೀಗಾಗಿ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಗ್ರಾಮೀಣ ವಿ.ವಿ. ಸ್ಥಾಪನೆಗೆ ಸುಗ್ರಿವಾಜ್ಞೆ ಹೊರಡಿಸಿ, ರಾಜ್ಯಪಾಲರ ಸಹಿಗೆ ಕಳುಹಿಸಿತ್ತು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ವಾಸ್ತವವಾಗಿ ಕಾಂಗ್ರೆಸ್ ಪ್ರಬಲ್ಯ ಕುಸಿದಿಲ್ಲ, ಬಿಜೆಪಿ ಪ್ರಾಬಲ್ಯ ಕುಸಿದಿದೆ: ಸಿಎಂ ಸಿದ್ದರಾಮಯ್ಯ