Select Your Language

Notifications

webdunia
webdunia
webdunia
webdunia

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

RV College lecturer

Krishnaveni K

ಬೆಂಗಳೂರು , ಶನಿವಾರ, 14 ಜೂನ್ 2025 (20:36 IST)
ಬೆಂಗಳೂರು: ತರಗತಿಯಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಆರ್ ವಿ ಕಾಲೇಜು ಆಡಳಿತ ಮಂಡಳಿ ಉಪನ್ಯಾಸಕರನ್ನು ಕೆಲಸದಿಂದ ಕಿತ್ತು ಹಾಕಿದ ಘಟನೆ ಈಗ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೋಣನಕುಂಟೆಯ ಆರ್ ವಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ತರಗತಿಯಲ್ಲಿ ವಿದ್ಯಾರ್ಥಿ ಅನುಮಾನ ಕೇಳಿದಾಗ ಉಪನ್ಯಾಸಕ ರೂಪೇಶ್ ಪುತ್ತೂರು ಎಂಬವರು ಕನ್ನಡದಲ್ಲೇ ಉತ್ತರಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಉಪನ್ಯಾಸಕರನ್ನು ಕೆಲಸದಿಂದ ಕಿತ್ತು ಹಾಕಲಾಗಿದೆ. ಅಷ್ಟೇ ಅಲ್ಲದೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಉಪನ್ಯಾಸಕರ ಪುತ್ರಿಗೂ ಟಿಸಿ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಪನ್ಯಾಸಕರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ಕನ್ನಡ ಪರ ಸಂಘಟನೆಗಳು ಈಗ ಕಾಲೇಜು ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದೆ. ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ, ಈ ಬಗ್ಗೆ ಟ್ವೀಟ್ ಮಾಡಿದ್ದು, ಉಪನ್ಯಾಸಕರ ಜೊತೆ ಹೋರಾಟಕ್ಕೆ ನಾವು ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಆದರೆ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ