Publish Date: Fri, 14 Apr 2023 (14:13 IST)
Updated Date: Fri, 14 Apr 2023 (13:47 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಭಾರೀ ಕುತೂಹಲ ಕೆರಳಿಸಿದ್ದ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಹೈಕಮಾಂಡ್ ಮಂಗಳವಾರ ರಿಲೀಸ್ ಮಾಡಿತ್ತು. ಈ ಬೆನ್ನಲ್ಲೇ ಕೆಲವು ಟಿಕೆಟ್ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಇವರಲ್ಲಿ ಎಸ್. ಅಂಗಾರ ಕೂಡ ಒಬ್ಬರಾಗಿದ್ದಾರೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯದಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲ ಎಂದಿರುವ ಅಂಗಾರ, ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.