ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ವಿಚಾರ ಕೇವಲ ಊಹಾಪೋಹ ಎಂದು ಕೃಷ್ಣ ಅವರ ಆಪ್ತ ಸ್ನೇಹಿತ ರವೀಂದ್ರ ಶ್ರೀಕಂಠಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಆದರೆ, ಅದು ಅವರ ವೈಯಕ್ತಿಕ ಅಭಿಪ್ರಾಯವಷ್ಟೇ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಗೌರವದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಜನವರಿ 28ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜಕೀಯ ಪಕ್ಷಗಳು ಕೃಷ್ಟ ಅವರಿಗೆ ಗಾಳ ಹಾಕುತ್ತಿದ್ದು, ಅವರು ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ